ಸುದ್ದಿ ಜನಾಂದೋಲನದ ಫಲಕ ಸ್ವೀಕರಿಸಿ – ಬೆಂಬಲ ಸೂಚಿಸಿದ ರಾಜ್ಯಮಟ್ಟದ ನಾಯಕರುಗಳು
ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಗರಣದ ವಿರುದ್ಧ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯು ಮಂಡ್ಯದಲ್ಲಿ ಅದ್ಧೂರಿಯಾಗಿ ನಡೆಯುತ್ತಿದ್ದು, ಬಿಜೆಪಿ ಮತ್ತು ಜೆ.ಡಿ.ಎಸ್. ಪಕ್ಷದ ರಾಜ್ಯಮಟ್ಟದ ನಾಯಕರು ಸುದ್ದಿ ಜನಾಂದೋಲನದ ಲಂಚ – ಭ್ರಷ್ಟಾಚಾರ ವಿರೋಧಿ ಫಲಕ ಸ್ವೀಕರಿಸಿ, ಬೆಂಬಲ ಸೂಚಿಸಿದರು.
ಬಿಜೆಪಿ ನಾಯಕರಾದ ಸಿ.ಟಿ. ರವಿ, ಕೋಲಾರ ಮಾಜಿ ಸಂಸದ ಮುನಿಸ್ವಾಮಿ, ಪ್ರಮೋದ್ ಮಧ್ವರಾಜ್, ಮಂಡ್ಯ ಜೆಡಿಎಸ್. ಜಿಲ್ಲಾ ಘಟಕದ ಅಧ್ಯಕ್ಷ ಎಸ್. ನಂಜುಂಡೇ ಗೌಡ ಅವರು ಸುದ್ದಿ ಜನಾಂದೋಲನದ ಫಲಕ ಸ್ವೀಕರಿಸಿ ಬೆಂಬಲ ವ್ಯಕ್ತಪಡಿಸಿದರು.