ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯುವಜನ ಸಂಯುಕ್ತ ಮಂಡಳಿ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ಆ.14 ರಂದು ಸ್ಪರ್ಧೆಗಳ ಆಯೋಜನೆ

0

77 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ.14 ರಂದು ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿ ಆಶ್ರಯದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ನಿವೃತ್ತ ಯೋಧ ಬಾಲಕೃಷ್ಣ ಎನ್.ಬಿ. ಉದ್ಘಾಟಿಸುವರು. ರೋಟರಿ ಜಿಲ್ಲೆಯ ವಲಯ ಸೇನಾನಿ ರೊ.ಮುರಳೀಧರ ರೈ ಮುಖ್ಯ ಅತಿಥಿಯಾಗಿರುವರು. ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪ್ರವೀಣ್ ಕುಮಾರ್ ಜಯನಗರ ಅಧ್ಯಕ್ಷತೆ ವಹಿಸುವರು. ರೋಟರಿ ಸುಳ್ಯ ಸಿಟಿ ಅಧ್ಯಕ್ಷ ಶಿವಪ್ರಸಾದ್ ಕೆ.ವಿ. ಉಪಸ್ಥಿತರಿರುವರು.
ತಾಲೂಕಿನ ಪ್ರೌಢಶಾಲಾ ಹಾಗೂ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಮತ್ತು ಸ್ವಾತಂತ್ರ್ಯದ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.