ಗುರುಂಪು ಜೀಪು- ಬೈಕ್ ಅಪಘಾತ – ಬೈಕ್ ಸವಾರ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

0

ಗುರುಂಪು ಎಂಬಲ್ಲಿ ಸಂಭವಿಸಿದ ಜೀಪು- ಬೈಕ್ ನಡುವೆ ನಡೆದ ಅಪಘಾತದಲ್ಲಿ ತಲೆಗೆ ಗಾಯಗೊಂಡ ಬೈಕ್ ಸವಾರ ಆಲೆಟ್ಟಿಯ ಶಶಿಧರನ್ ರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.


ಅಪಘಾತ ಸಂಭವಿಸಿ ತಲೆಯ ಭಾಗಕ್ಕೆ ಗಾಯಗೊಂಡ ಅವರನ್ನು ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ಸ್ಕ್ಯಾನಿಂಗ್ ಮಾಡಲಾಯಿತು. ಬಳಿಕ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ‌ ದಾಖಲಿಸಲಾಗಿದೆ.
ಅಪಘಾತ ನಡೆದ ಸ್ಥಳಕ್ಕೆ ಬಂದ ಸುಳ್ಯ ಪೋಲೀಸರು ಮಹಜರು ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ.