ಜಾಲ್ಸೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಸಾಶನ ವಿತರಣೆ

0

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ.ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕಿನ ಯೋಜನೆಯ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಧರ್ಮಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸು ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನಿರ್ಗತಿಕರ ಮಾಶಾಸನವನ್ನು ಜಾಲ್ಸೂರು ಗ್ರಾಮದ ಕುಂದ್ರುಕೋಡಿ ನಿವಾಸಿ ಶ್ರೀಮತಿ ದೇವಕಿ ಬಾಬು ನಾಯ್ಕ ವೃದ್ಧ ದಂಪತಿಗಳಿಗೆ ವಿತರಿಸಲಾಯಿತು.

ಶ್ರೀ ಕ್ಷೇತ್ರದಿಂದ ಮಾಶಾಸನ ಪ್ರತಿ ತಿಂಗಳು ರೂಪಾಯಿ ಒಂದು ಸಾವಿರವನ್ನು ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಜಾಲ್ಸೂರು ಒಕ್ಕೂಟದ ಅಧ್ಯಕ್ಷ ಗಣೇಶ್ ಅಂಬಾಡಿಮೂಲೆ, ಜಾಲ್ಸೂರು ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ದಿವ್ಯ ಅಡ್ಕಾರು, ಸುಳ್ಯ ತಾಲೂಕು ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಲಕ್ಷ್ಮೀ, ಜಾಲ್ಸೂರು ವಲಯದ ಮೇಲ್ವಿಚಾರಕ ತೀರ್ಥರಾಮ, ಸೇವಾಪ್ರತಿನಿಧಿ ಚಂದ್ರಕಲಾ ಹಾಗೂ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.