ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

0

ನೂತನವಾಗಿ ದಾಖಲಾತಿಗೊಂಡ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಓರಿಯೆಂಟೇ‍ಷನ್ ಕಾರ್ಯಕ್ರಮವನ್ನು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಆಗಸ್ಟ್ 10 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು AOLE(R) ಕಾರ್ಯದರ್ಶಿ ಹೇಮಾನಾಥ್ ಕೆ ವಿ ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗುವುದರೊಂದಿಗೆ ಉದ್ಘಾಟಿಸಲಾಯಿತು.ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಹಾಗೂ ಎನ್ ಎಮ್ ಪಿ ಯು ಪ್ರಾಂಶುಪಾಲರಾದ ಮಿಥಾಲಿ ಪಿ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ ರುದ್ರ ಕುಮಾರ್ ಎಮ್ ಎಮ್ ಪ್ರಾಸ್ಥಾವಿಕ ಭಾಷಣದೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.IQAC ನಿರ್ದೇಶಕಿ ಡಾ ಮಮತಾ ಕೆ ಕಾಲೇಜಿನ ನೀತಿ ನಿಯಮಗಳನ್ನು ನೂತನವಾಗಿ ದಾಖಲಾತಿಗೊಂಡ ವಿದ್ಯಾರ್ಥಿಗಳಿಗೆ ವಿವರಿಸಿದರು. ಉಪನ್ಯಾಸಕರಾದ ಕೃತಿಕಾ ಪ್ರಾರ್ಥಿಸಿದರು, ಭವ್ಯ ರಜತ್ ಕಾರ್ಯಕ್ರಮ ನಿರೂಪಿಸಿದರು, ಡಾ ಮಮತಾ ಕೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪೋಷಕರು, ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.