ಬಿಜೆಪಿ – ಜೆಡಿಎಸ್ ವತಿಯಿಂದ ಮೈಸೂರು ಚಲೋ ಪಾದಯಾತ್ರೆ

0

ಸಮಾರೋಪದಲ್ಲಿ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಗರಣಗಳ ವಿರುದ್ಧ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ವತಿಯಿಂದ ನಡೆದ ಮೈಸೂರು ಚಲೋ ಪಾದಯಾತ್ರೆ ಸಮಾರೋಪ ಸಮಾರಂಭವು ಮೈಸೂರಿನಲ್ಲಿ ಆ.10ರಂದು ನಡೆಯಿತು.

ಮೈಸೂರಿನಲ್ಲಿ ಜರುಗಿದ ಸಮಾರೋಪ ಸಮಾರಂಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪಕ್ಷದ ಮುಖಂಡರು ಹಾಗೂ ಸಾವಿರಾರು ಮಂದಿ ಕಾರ್ಯಕರ್ತರೊಂದಿಗೆ ಭಾಗವಹಿಸಿದ್ದರು.