ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಭವ್ಯ ಅಟ್ಲೂರು ಅವರಿಗೆ ಪರೀಕ್ಷಾ ಸ್ಪೂರ್ತಿ ಫೌಂಡೇಶನ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ಮೈಸೂರು ಘಟಕ ವತಿಯಿಂದ ಅ. 11 ರಂದು ಮೈಸೂರಿನ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ರಾಜ್ಯಮಟ್ಟದ ಶಿಕ್ಷಕ ಸಾಧಕ ರತ್ನ ಪ್ರಶಸ್ತಿಯನ್ನು ಕೊಟ್ಟು ಗೌರವಿಸಲಾಯಿತು .
ಈ ಸಂದರ್ಭದಲ್ಲಿ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶ್ರೀ ಮಡ್ಡಿಕೆರೆ ಗೋಪಾಲ್, ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರ, ವಿಧಾನ ಪರಿಷತ್ ಸದಸ್ಯ ಶ್ರೀ ವಿವೇಕಾನಂದ, ಮೈಸೂರಿನ ನ್ಯೂರೋ ಜೋನ್ ಗೋಪಾಲಗೌಡ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಸುಶ್ರುತ್ ಗೌಡ, ಮೈಸೂರಿನ ಇಫಿಮೇಡ್ ಸಂಸ್ಥೆಯ ನಿರ್ದೇಶಕ ಶ್ರೀ ಸುಧೀಂದ್ರ. ಎ, ಮಾಜಿ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಶ್ರೀ ನಟರಾಜ್, ಮೈಸೂರಿನ ಶ್ರೀ ಬಸವೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಬಸವರಾಜೇಂದ್ರ ಸ್ವಾಮಿ ಮತ್ತು ರಾಜ್ಯಮಟ್ಟದಿಂದ ಆಯ್ಕೆಯಾದ ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು.