ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ M. S. W. ಪದವಿಧರ ಎಡಮಂಗಳದ ಚಂದ್ರಶೇಖರ ಎ. ಅವರನ್ನು ನೇಮಕ ಮಾಡಲಾಗಿದೆ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಗ್ರಾಮ ವಿಕಾಸ ಯೋಜನಾಧಿಕಾರಿಯಾಗಿ ಅನುಭವ ಉಳ್ಳವರಾಗಿದ್ದಾರೆ. ಗ್ರಾಮ ಪಂಚಾಯತ್ ಹಾಗೂ ನಗರ ಪಂಚಾಯತ್ ಗಳ ಅಭಿವೃದ್ಧಿ ಯೋಜನೆಗಳಲ್ಲಿ ಪಾಲ್ಗೊಂಡ ಅನುಭವ ಅವರಿಗೆ ಇದೆ. ಸ್ನೇಹ ಸಂಸ್ಥೆಯಲ್ಲಿ ಅವರು ಮರದ ಆಟಿಗೆಗಳ ಉದ್ಯಮದ ಮೆನೇಜರ್ ಆಗಿಯೂ ಕಾರ್ಯನಿರ್ವಹಿಸಲಿದ್ದಾರೆ ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆಯವರು ತಿಳಿಸಿದ್ದಾರೆ.