ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಸ್ವ ಸಹಾಯ ಸಂಘದ ನವಜೀವನ ಸೇವಾ ಸಮಿತಿಯಿಂದ ಆ.11 ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು,ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್.ರೈ, ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಮಾಧವ ಗೌಡ, ಬೆಳ್ಳಾರೆ ವಲಯ ಮೇಲ್ವಿಚಾರಕಿ ಶ್ರೀಮತಿ ವಿಶಾಲ ಕೆ, ನವಜೀವನ ಸಮಿತಿಯ ಸದಸ್ಯರು, ಶಿಬಿರದ ವ್ಯ.ಸ.ಪದಾಧಿಕಾರಿಗಳು ಉಪಸ್ಥಿತರಿದ್ದರು.