ಕೇನ್ಯ ಶ್ರೀ ದುರ್ಗಾ ಮಹಿಳಾ ಮಂಡಲದ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆ. 10ರಂದು ಕೇನ್ಯ ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆಯಿತು. ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ತಾರಾ ಬಿ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೌಷ್ಟಿಕ ಆಹಾರದ ಬಗ್ಗೆ ಸಮುದಾಯ ಆರೋಗ್ಯ ಅಧಿಕಾರಿ ಫೃಥ್ವಿ ಮಾಹಿತಿ ನೀಡಿದರು. ಮಹಿಳೆಯರ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳ ಬಗ್ಗೆ ಆಪ್ತ ಸಮಾಲೋಚಕಿ ಶ್ರದ್ಧಾ ಎಲ್ ರೈ ಕೇನ್ಯ ಮಾಹಿತಿ ನೀಡಿದರು. ಮಹಿಳಾ ಮಂಡಲದ ಉಪಾಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ ರೈ ಸ್ವಾಗತಿಸಿ, ಜ್ಯೋತಿ ರೈ ಕಂಡೆಬಾಯಿ ವಂದಿಸಿದರು. ಶ್ರೀಮತಿ ವನಜಾ ಎಸ್. ರೈ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಆಟಿಯ ವಿಶೇಷ ಖಾದ್ಯಗಳನ್ನು ಸವಿಯಲಾಯಿತು.