ಬೆಂಗಳೂರಿನಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ

0

ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಬೆಂಗಳೂರಿನ ರಾಮಮೂರ್ತಿ ನಗರದ ಜಯಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸ್ವಸ್ತಿಕ್ ಎಂ. ಕಿಶೋರ ವರ್ಗದ(50 ಕೆ.ಜಿ ವಿಭಾಗ) ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿದ್ದಾನೆ.


ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ ಅಕ್ಷಯ್ ಬಿ. ಟಿ. 40 ಕೆಜಿ ವಿಭಾಗಗಲ್ಲಿ ದ್ವಿತೀಯ ಸ್ಥಾನಗಳಿಸಿದ್ದಾರೆ.