ಸುಳ್ಯದಲ್ಲಿ ಬೈಕ್ ಹಾಗೂ ಸ್ಕೂಟಿ ನಡುವೆ ಅಪಘಾತ

0

ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಮಗು



ಬೈಕ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಸುಳ್ಯ ಜೂನಿಯರ್ ಕಾಲೇಜು ರಸ್ತೆ ಬಳಿ ಇಂದು ಸಂಜೆ ಸಂಭವಿಸಿದೆ.


ಸುಳ್ಯದ ಜೂನಿಯರ್ ಕಾಲೇಜು ರಸ್ತೆಯ ಪಲ್ಲವಿ ಸ್ಟೋರ್ ಬಳಿ ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿತು. ಅಡ್ಡದಾರಿಯಲ್ಲಿ ಒಂದು ದ್ವಿಚಕ್ರ ವಾಹನ ನುಗ್ಗಿದ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸ್ಕೂಟಿಯಲ್ಲಿ ಸವಾರನ ಜತೆ ಸಣ್ಣ ಮಗು ಕೂಡ ಇದ್ದು, ಘಟನೆಯಿಂದ ಮಗು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದೆ ಎಂದು ತಿಳಿದುಬಂದಿದೆ.