ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಮತ್ತು ಆಟಿದ ಕೂಟ

0

ಗ್ರಾಮ ಪಂಚಾಯತು ಬೆಳ್ಳಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಹಾಗೂ ಸ್ನೇಹಶ್ರೀ ಮಹಿಳಾ ಮಂಡಲ ರಿ, ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಹಾಗೂ ಆಟಿದ ಕೂಟದ ಕಾರ್ಯಕ್ರಮ ಆ. 8ರಂದು ಬೆಳ್ಳಾರೆಯ ರಾಜೀವ್ ಗಾಂಧಿ ಸಭಾ ಕೇಂದ್ರದಲ್ಲಿ ನಡೆಯಿತು.
ಸಭಾಧ್ಯಕ್ಷತೆಯನ್ನು ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪೂರ್ಣಿಮಾ ಪಡ್ಪು ವಹಿಸಿದ್ದರು. ಕಾರ್ಯಕ್ರಮವನ್ನು ಬೆಳ್ಳಾರೆ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ಳಾರೆ ವಿಜಯ ಹೋಮಿಯೋ ಕ್ಲಿನಿಕ್ ನ ವೈದ್ಯೆ ಡಾ. ವರ್ಷಿಣಿ ಶೆಣೈ, ಅತಿಥಿಯಾಗಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಿರಣ್ ಉಪಸ್ಥಿತರಿದ್ದರು. ಆಟಿದ ಕೂಟದ ಪ್ರಯುಕ್ತ ಆಟಿಯ ವಿಶೇಷ ತಿಂಡಿ ತಿನಸುಗಳ ಪ್ರದರ್ಶನ ಹಾಗೂ ಸ್ಪರ್ಧೆ ನಡೆಯಿತು. ನಂತರ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಭಾರತಿ ಕೊಳಂಬಳ ಸ್ವಾಗತಿಸಿ, ಜತೆ ಕಾರ್ಯದರ್ಶಿ ಶೋಭನಾ ಪನ್ನೆ ವಂದಿಸಿದರು. ಕೋಶಾಧಿಕಾರಿ ಕುಸುಮ ಕುರುಂಬುಡೇಲು ಕಾರ್ಯಕ್ರಮ ನಿರೂಪಿಸಿದರು.