ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ವಿವೇಕವಾಣಿ ಉಪನ್ಯಾಸ ಕಾರ್ಯಕ್ರಮ

0

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ವಿವೇಕವಾಣಿ ಸರಣಿಯ 38ನೇ ಉಪನ್ಯಾಸ ಕಾರ್ಯಕ್ರಮವನ್ನು ಮೈಸೂರು ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆ (RIMSE), ಇದರ ಸಂಚಾಲಕರಾದ
ಸ್ವಾಮಿ ಮಹಾಮೇಧಾನಂದಜಿಯವರು
“ಸ್ವಾಮಿ ವಿವೇಕಾನಂದರ ದೃಷ್ಟಿಕೋನದಲ್ಲಿ ಸಿಂಹ ಚಿಂತನೆ” ಎಂಬ ವಿಷಯದ ಬಗ್ಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ಆ. 12ರಂದು ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರಿಗೆ “ಯೋಚನಾ ದೃಷ್ಟಿಕೋನ ” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಸಿಕೊಟ್ಟರು.


ಕಾರ್ಯಕ್ರಮದ ಉದ್ಘಾಟನೆಯನ್ನು ಸ್ವಾಮಿ ಮಹಾಮೇಧಾನಂದಜಿ ನೆರವೇರಿಸಿದರು. ವೇದಿಕೆಯಲ್ಲಿ
ಮಾಜಿ ಸೈನಿಕರಾದ ಬೆಳ್ಳಾಲ್ ಗೋಪಿನಾಥ್ ರಾವ್, ಮಂಗಳೂರಿನ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಯೋಜಕರಾದ ಡಾ. ಚಂದ್ರು ಹೆಗ್ಡೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ., ಅಗದ ತಂತ್ರ ವಿಭಾಗದ ಪ್ರೊಫೆಸರ್ ಡಾ. ಅವಿನಾಶ್ ಕೆ.ವಿ., ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ. ಶೀಲಾ ಜಿ. ನಾಯಕ್, ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಕಲಿಕಾ ವೈದ್ಯರುಗಳು, ಸ್ನಾತಕೋತ್ತರ, ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸಂಸ್ಥೆಯ ಪ್ರಸೂತಿ ತಂತ್ರ ಹಾಗೂ ಸ್ತ್ರೀ ರೋಗ ವಿಭಾಗ ಮುಖ್ಯಸ್ಥರಾದ ಪ್ರೊಫೆಸರ್ ಅಶೋಕ್ ಕೆ ಯವರು ಇಂದಿನ ಕಾರ್ಯಕ್ರಮವನ್ನು ನಡೆಸಿಕೊಟ್ಟ ಸ್ವಾಮಿ ಮಹಾಮೇಧಾನಂದಜಿ ಯವರನ್ನು ಸನ್ಮಾನಿಸಿದರು.
ಕಾವ್ಯ ಎಸ್ ಗೌಡ, ಕಾವ್ಯ ಭಟ್ ಹಾಗೂ ಮೌಲ್ಯ ಎಸ್ ಪ್ರಾರ್ಥಿಸಿದರು.
ಡಾ. ಹರ್ಷಿತಾ ಎಂ. ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು.
ಡಾ. ಚಂದ್ರು ಹೆಗ್ಡೆ ಸ್ವಾಗತಿಸಿ, ಡಾ. ಅವಿನಾಶ್ ಕೆ. ವಿ ವಂದಿಸಿದರು .
ಭವಿತ್ ಶಂಕರ್ ಶೆಟ್ಟಿ, ಅನನ್ಯ ಹೆಚ್. ಎಸ್, ಚೇತನ ಎಂ ಹಾಗೂ ಸ್ನೇಹ ಕೆ.ಸಿ ಕಾರ್ಯಕ್ರಮ ನಿರೂಪಿಸಿದರು.