ಮುರುಳ್ಯ: ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಪಂಜ ಇದರ ಗೀತಗಾಯನ ಸ್ಪರ್ಧೆ ಕಾರ್ಯಕ್ರಮ

0

ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಪಂಜ ಇದರ ಗೀತಗಾಯನ ಸ್ಪರ್ಧೆ ಕಾರ್ಯಕ್ರಮವು ಆ 13 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯದ ಶಾಂತಿನಗರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಕ್ಕಳಿಗಾಗಿ ನಡೆಸುವ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತ ಸುವರ್ಣ, ಉಪಾಧ್ಯಕ್ಷೆ ಜಾನಕಿ ಮುರುಳ್ಯ, ಸದಸ್ಯರಾದ ಶೀಲಾವತಿ ಗೊಳ್ತಿಲ, ಪಂಜ ಸ್ಥಳಿಯ ಸಂಸ್ಥೆಗಳ ಅಧ್ಯಕ್ಷ ಮಾಧವ ಬಿ.ಕೆ.ಎಸ್ ಡಿ ಎಮ್ ಸಿ ಅಧ್ಯಕ್ಷ ದಿನೇಶ್ ನಡುಬೈಲು,ತೀರ್ಪುಗಾರರಾದ ಉದಯ ಭಾಸ್ಕರ ಸುಳ್ಯ, ಆಶ್ವಿನಿ ಕೊಳಿಬೈಲು, ಮತ್ತು ಶಾಲಾ ವಿದ್ಯಾರ್ಥಿಗಳು , ಪೋಷಕರು ಉಪಸ್ಥಿತರಿದ್ದರು.