ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ಆ.10 ರಂದು ನಡೆಯಿತು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷರಾದ ಶಿವರಾಮ್ ಏನೇಕಲ್ ವಹಿಸಿದ್ದರು ಉದ್ಘಾಟನೆಯನ್ನು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷೆ ಶ್ರೀಮತಿ ವಿಮಲ ರಂಗಯ್ಯ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಗಣೇಶ್ ಆಚಾರ್ಯ ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದ ದೂರ ಇರುವಂತೆ ಹೇಳಿದರು ಹಾಗೂ ಅದರಿಂದಾಗುವ ದುಷ್ಪರಿಣಾಮವನ್ನು ವಿದ್ಯಾರ್ಥಿಗಳಿಗೆ ಸವಿವರವಾಗಿ ತಿಳಿಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ,
ಸುಬ್ರಹ್ಮಣ್ಯ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಪವಿತ್ರ ದಿನೇಶ್, ಹಾಗೂ ಶ್ರೀಮತಿ ವಿದ್ಯಾರತ್ನ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಘಟಕದ ಮೇಲ್ವಿಚಾರಕರಾದ ಕೃಷ್ಣಪ್ಪ ನಿರೂಪಿಸಿದರು. ತೀರ್ಥರಾಮ ಸ್ವಾಗತಿಸಿ, ಶ್ರೀಮತಿ ವಿದ್ಯಾರತ್ನ ವಂದಿಸಿದರು.