ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಾವಿನಕಟ್ಟೆ (ದೇವಚಳ್ಳ )ಒಕ್ಕೂಟದ ವತಿಯಿಂದ ಶೃದ್ಧಾ ಕೇಂದ್ರದ ಸ್ವಚ್ಛತೆಯ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾವಿನಕಟ್ಟೆಯಲ್ಲಿ ಇಲ್ಲಿ ಆ.10 ರಂದು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಬಾನು ಪ್ರಕಾಶ್, ಸೇವಾ ಪ್ರತಿನಿಧಿಯಾದ ಶ್ರೀಮತಿ ಉಷಾಲತಾ, ಉಪಾಧ್ಯಕ್ಷರು, ಕಾರ್ಯದರ್ಶಿ, ಮತ್ತು ಸಂಘದ ಸದಸ್ಯರು ಭಾಗವಹಿಸಿದರು.