ವಿದ್ಯಾರ್ಥಿಗಳ ಭವಿಷ್ಯದ ನಿರ್ಧಾರಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಅತ್ಯಗತ್ಯ.-ಡಾ. ಉಜ್ವಲ್ ಯು ಜೆ.
ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ career guidance cell ಇದರ ಆಶ್ರಯದಲ್ಲಿ
ವಿದ್ಯಾರ್ಥಿಗಳಿಗೆ ಎನ್ ಡಿ ಎ ಕಾರ್ಯವೈಖರಿ ಮತ್ತು ಉಪಯುಕ್ತತೆಯ ಮಾಹಿತಿ ಹಂಚಿಕೆ ಕಾರ್ಯಕ್ರಮವನ್ನು ಆ. 14ರಂದು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ನಿವೃತ ಸೇನಾಧಿಕಾರಿ ಲೆಫ್ಟಿಂನೆಂಟ್ ಕರ್ನಲ್ ಪಿ ವಿ ಚಾಕೋ ಆಗಮಿಸಿ ವಿದ್ಯಾರ್ಥಿಗಳಿಗೆ ಹಲವು ಉಪಯುಕ್ತ ಮಾಹಿತಿ, ಮತ್ತು ಎನ್ ಡಿ ಎ ಇಂದ ಸ್ಪರ್ಧಾತ್ಮಕ ಪರೀಕ್ಷೆಗೆ ಹೇಗೆ ಸಹಕಾರಿಯಾಗುತ್ತದೆ. ಎಂಬುದನ್ನು ತಿಳಿಸಿಕೊಡುವುದರ ಜೊತೆಗೆ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ NDA ಯನ್ನು ಪ್ರೋತ್ಸಾಹಿಸುತ್ತಿರುವುದನ್ನು ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಿಇಒ ಡಾ. ಉಜ್ವಲ್ ಯುಜೆ ವಹಿಸಿದ್ದರು. ನಿವೃತ ಸೇನಾಧಿಕಾರಿ ಹಾಗೂ ಸಂಪನ್ಮೂಲ ವ್ಯಕ್ತಿಯಾದ ಲೆಫ್ಟಿಂನೆಂಟ್ ಕರ್ನಲ್ ಪಿ ವಿ ಚಾಕೋರವರನ್ನು ಸನ್ಮಾನಿಸಿದ ಡಾ. ಉಜ್ವಲ್ ಯು ಜೆ ರವರು ಮಾತನಾಡಿ ಜೆಇಇ/ನೀಟ್/ಸಿಇಟಿ ಜೊತೆಗೆ ಎಲ್ಲಾ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್, ಕೆವಿಜಿ ಅಮರಜ್ಯೋತಿ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಕೆವಿಜಿ ಐಪಿಎಸ್ ನ ಪ್ರಾಂಶುಪಾಲರಾದ ಅರುಣ್ ಕುಮಾರ್ ಹಾಗೂ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಭಾಗವಹಿಸಿದ್ದರು. ಮನಸ್ವಿ ಮತ್ತು ತಂಡದವರ ಪ್ರಾರ್ಥಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿನಿ ಕಲೀದ ನೂಹ ಸ್ವಾಗತಿಸಿ, ನಿತಿನ್ ಥೋಮಸ್ ವಂದಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿ ತನ್ವಿ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಥಮ ಪಿಯುಸಿ ಖುಷಿ ಅತಿಥಿಗಳ ಪರಿಚಯವನ್ನು ಮಾಡಿಕೊಟ್ಟರು. ಎನ್ ಡಿ ಎ ಪ್ರಮುಖ ಅಂಶಗಳನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕಿ ಭವ್ಯ ವಿವರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು, ಕೆವಿಜಿ ಐ ಪಿ ಎಸ್ ನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಿದರು.