ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಡಿ.ಸಿ‌.ಸಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ – ಸನ್ಮಾನ

0

ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಆ.14 ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ 2023-24 ನೇ ಸಾಲಿನ ಸಾಧನೆಯನ್ನು ಗುರುತಿಸಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ರವರು ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು ಮತ್ತು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಮ್ಮಯ್ಯ ಪಿಂಡಿಮನೆ ಯವರನ್ನು ಶಾಲು ಹೊದಿಸಿ,ಸಾಧನಾ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ದ.ಕ.ಜೇನು ವ್ಯ.ಸ.ಸಂಘದ ನಿರ್ದೇಶಕರಾದ ಪುರುಷೋತ್ತಮ ಭಟ್ ಮಂಗಳೂರು,
ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರು, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.