ಆಲೆಟ್ಟಿ ಯುವಕ ಮಂಡಲದ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಯನ್ನು ಆ.15 ರಂದು ಯುವಕ ಮಂಡಲದ ಎದುರಿನಲ್ಲಿ ಆಚರಿಸಲಾಯಿತು.
ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾ ಆಲೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಯುವಕ ಮಂಡಲದ ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಆಲೆಟ್ಟಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಮಲ ನಾಗಪಟ್ಟಣ, ಕಸ್ತೂರಿ ಬಾ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಯಶೋಧ ಕುಡೆಕಲ್ಲು, ಪಂಚಾಯತ್ ಸದಸ್ಯರಾದ ದಿನೇಶ್ ಕಣಕ್ಕೂರು, ಸತ್ಯ ಪ್ರಸಾದ್ ಗಬ್ಬಲ್ಕಜೆ ಹಾಗೂ ಹಿರಿಯರಾದ ಅಚ್ಚುತ ಮಣಿಯಾಣಿ ಆಲೆಟ್ಟಿ, ಚಿದಾನಂದ ನೂಜಿನಮೂಲೆ,ಶ್ರೀಮತಿ ಗೌರಿ ಆಲೆಟ್ಟಿ,
ಸ್ಥಳೀಯ ಜನನಿ ಫ್ರೆಂಡ್ಸ್ ಕ್ಲಬ್ ಪದಾಧಿಕಾರಿಗಳು, ಯುವಕ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.