ಆಲೆಟ್ಟಿ ಪಂಚಾಯತ್ ನಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಆಲೆಟ್ಟಿ ಪಂಚಾಯತ್ ನಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಯನ್ನು ಆ.15 ರಂದು ಪಂಚಾಯತ್ ಎದುರು ಆಚರಿಸಲಾಯಿತು.

ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾ ಆಲೆಟ್ಟಿ ಧ್ವಜಾರೋಹಣ ನೆರವೇರಿಸಿದರು.


ಆಲೆಟ್ಟಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಮಲ ನಾಗಪಟ್ಟಣ, ಕಸ್ತೂರಿ ಬಾ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಯಶೋಧ ಕುಡೆಕಲ್ಲು, ಪಂಚಾಯತ್ ಸದಸ್ಯರಾದ ದಿನೇಶ್ ಕಣಕ್ಕೂರು, ಸತ್ಯ ಪ್ರಸಾದ್ ಗಬ್ಬಲ್ಕಜೆ
ಯುವಕ ಮಂಡಲದ ಗೌರವಾಧ್ಯಕ್ಷ ರಾಮಚಂದ್ರ ಆಲೆಟ್ಟಿ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗದವರು, ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು