ಮೊಗರ್ಪಣೆ ಜುಮ್ಮಾ ಮಸ್ಜಿದ್ ‌ಹಾಗೂ ನೂರುಲ್ ಇಸ್ಲಾಂ ಮದರಸದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಮೊಗರ್ಪಣೆ ಎಚ್ ಐ ಜೆ ಕಮಿಟಿ ಆಶ್ರಯದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ
ಮಸ್ಜಿದ್ ವಠಾರದಲ್ಲಿ ನಡೆಯಿತು. ಮಸ್ಜಿದ್ ಖತೀಬರು ಹಾಗೂ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಖಾಫಿ ಪ್ರಾರ್ಥನೆ ನೆರವೇರಿಸಿದರು. ಎಚ್ ಐ ಜೆ ಕಮಿಟಿ ಅಧ್ಯಕ್ಷ ಹಾಜಿ ಜಿ ಇಬ್ರಾಹಿಂ ಸೀ ಫುಡ್ ರವರು ದ್ವಜಾರೋಹಣ ನೆರವೇರಿಸಿದರು. ನೂರುಲ್ ಇಸ್ಲಾಮ್ ಮದರಸ ಸದರ್ ಮುಅಲ್ಲಿಮ್ ಅಬ್ದುಲ್ ಕರೀಂ ಸಖಾಫಿ ಸಂದೇಶ ಭಾಷಣವನ್ನು ಮಾಡಿದರು.

ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್ ಯು ಇಬ್ರಾಹಿಂ, ಉಪಾಧ್ಯಕ್ಷ ಸಿ ಎಂ ಉಸ್ಮಾನ್, ಕೋಶಾಧಿಕಾರಿ ಮಹಮ್ಮದ್ ಆದರ್ಶ, ಕಾರ್ಯದರ್ಶಿ ಎಸ್ ವೈ ಅಬ್ದುಲ್ ರಹಿಮಾನ್, ಸದಸ್ಯರು ಗಳಾದ ಎಸ್ ಸಂಶುದ್ದೀನ್ ಅರಂಬೂರು, ಅಬ್ದುಲ್ ಖಾದರ್,ಹಾಗೂ ಸಮಿತಿಯ ಸದಸ್ಯರು, ಮದರಸ ಅಧ್ಯಾಪಕ ವೃಂದ, ಸಹ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು.

ಅಬ್ದುಲ್ ಕರೀಂ ಸಖಾಫಿ ಸ್ವಾಗತಿಸಿ ಹಂಝ ಸಖಾಫಿ ವಂದಿಸಿದರು.