ಕೆ ವಿ ಜಿ ಐಪಿಎಸ್ ನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಕ್ಷಣಾ ಸೇವಾ ಕಾರ್ಯಾಗಾರ

0

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಕ್ಷಣಾ ಸೇವಾ ಕಾರ್ಯಾಗಾರವನ್ನು ಅ. 14 ರಂದು ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಉಪ ಪ್ರಾಂಶುಪಾಲೆ ಶಿಲ್ಪಾ ಬಿದ್ದಪ್ಪ ಶುಭ ಹಾರೈಸಿದರು.

ವಿದ್ಯಾರ್ಥಿಗಳು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ಬಳಿಕ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ‘ ಪಿಯುಸಿ ನಂತರ ಮುಂದೇನು? ಎಂಬ ಪ್ರಶ್ನೆ ಹಲವಾರು ವಿದ್ಯಾರ್ಥಿಗಳನ್ನು ಕಾಡುತ್ತದೆ. ವಿದ್ಯಾರ್ಥಿಗಳಿಗೆ ಮುಂದೆ ಬರಲು ಹಲವಾರು ದಾರಿಗಳು ಇದೆ ಎಂಬುದರ ಬಗ್ಗೆ ‘ತಿಳಿಸಿದರು.

ಆ ಬಳಿಕ ಮಾತನಾಡಿದ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ ‘ ವಿದ್ಯಾರ್ಥಿಗಳು ಗುರಿ ಇಟ್ಟುಕೊಳ್ಳುವುದು ಅತಿ ಮುಖ್ಯ. ನಿಮಗೆ ಸೂಕ್ತ ಅವಕಾಶ ಒದಗಿಸಿ ಗುರಿ ತಲುಪಿಸುವ ಜವಾಬ್ದಾರಿ ನಮ್ಮದು. ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವುದು ನಿಮ್ಮ ಕರ್ತವ್ಯ ‘ ಎಂದರು.

ಬಳಿಕ ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪಿ ವಿ ಚಾಕೋ ಆಗಮಿಸಿ ರಾಷ್ಟ್ರೀಯ ರಕ್ಷಣಾ ಸೇವೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಹಲವಾರು ಮಾಹಿತಿಗಳನ್ನು ಸಂಕ್ಷಿಪ್ತವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, ಅಮರ ಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ, ಉಪ ಪ್ರಾಂಶುಪಾಲ ದೀಪಕ್ ವೈ ಆರ್, ಅಮರ ಜ್ಯೋತಿ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಕೆವಿಜಿ ಐಪಿಎಸ್ ನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.