ಸುಳ್ಯ ಮರಾಟಿ ಸಮಾಜ ಸೇವಾ ಸಂಘದಲ್ಲಿ ಸ್ವಾತಂತ್ರ ದಿನಾಚರಣೆ

0

ಸುಳ್ಯದ ಅಂಬಟೆಡ್ಕದಲ್ಲಿರುವ ಮರಾಟಿ ಸಮಾಜ ಸೇವಾ ಸಂಘದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷ ಜನಾರ್ಧನ ಬಿ ಕುರುಂಜಿಭಾಗ್ ಧ್ವಜಾರೋಹಣ ನೆರವೇರಿಸಿ ಶುಭಾಶಯ ಹೇಳಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ಅಜ್ಜಾವರ ಕಾರ್ಯಕ್ರಮ ನಡೆಸಿಕೊಟ್ಟರು. ಸಂಘದ ಸ್ಥಾಪಕಾಧ್ಯಕ್ಷ ಜಿ. ದೇವಪ್ಪ ನಾಯ್ಕ್, ಸ್ಥಾಪಕ ಕಾರ್ಯದರ್ಶಿ ಗೋಪಾಲ್ ನಾಯ್ಕ್ ದೊಡ್ಡೇರಿ, ಗೌರವಾಧ್ಯಕ್ಷ ಸೀತಾನಂದ ಬೇರ್ಪಡ್ಕ, ಸಂಘದ ಕೋಶಾಧಿಕಾರಿ ಜನಾರ್ಧನ ನಾಯ್ಕ್ ಕೇರ್ಪಳ ಮತ್ತು ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ವೇದಿಕೆ ಅಧ್ಯಕ್ಷ ಶ್ರೀಮತಿ ಗಿರಿಜಾ ಜನಾರ್ಧನ್ ಮತ್ತು ಎಲ್ಲಾ ಪದಾಧಿಕಾರಿಗಳು,ಸದಸ್ಯರು, ಯುವ ವೇದಿಕೆ ಕಾರ್ಯದರ್ಶಿ ಉದಯ್ ಮಾಣಿಬೆಟ್ಟು ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸಿತರಿದ್ದು ಧ್ವಜವಂದನ ಸಲ್ಲಿಸಿದರು.