![](https://sullia.suddinews.com/wp-content/uploads/2024/08/ad1d40fe-82f2-4852-b2fd-1e3523754991-1024x768.jpg)
ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 78ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ‍್ಯೋತ್ಸವದ ಮಹತ್ವವನ್ನು ಸಾರಿದರು.
![](https://sullia.suddinews.com/wp-content/uploads/2024/08/b1130c66-d6e2-47c6-9655-4fe3c21a3b58-768x1024.jpg)
ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಕೌಂನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಎಡ್ವೈಸರ್ ಪ್ರೋ. ದಾಮೋದರ ಗೌಡ, ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಚಂದ್ರಶೇಖರ್ ಪೇರಾಲು, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ., ಕೆವಿಜಿ ಆಯುರ್ ಫಾರ್ಮ ಮತ್ತು ರಿಸರ್ಚ್ ಸೆಂಟರ್ ನ ಮುಖ್ಯ ಕಾರ್ಯಾನಿರ್ವಾಹಣಾಧಿಕಾರಿ ಡಾ. ಪುರುಷೋತ್ತಮ ಕೆ. ಜಿ., ಕೆವಿಜಿ ಆಯುರ್ವೇದ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ. ಸನತ್ ಕುಮಾರ್ ಡಿ. ಜಿ., ಎನ್.ಎಸ್.ಎಸ್ ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ. ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.
![](https://sullia.suddinews.com/wp-content/uploads/2024/08/2de2d3f3-489d-4d4f-9584-b0d4abb3925b-768x1024.jpg)