ಗ್ರಾ.ಪಂ. ಗ್ರಂಥಾಲಯ ಅರಿವು ಕೇಂದ್ರದ ನಾಮಫಲಕ ಅನಾವರಣ
ಕನಕಮಜಲು ಗ್ರಾಮ ಪಂಚಾಯತಿ ವಠಾರದಲ್ಲಿ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಆಚರಿಸಲಾಯಿತು.
ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಾರದಾ ಉಗ್ಗಮೂಲೆ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.
ಈ ವೇಳೆ ಗ್ರಾ.ಪಂ. ಗ್ರಂಥಾಲಯದ ಅರಿವು ಕೇಂದ್ರದ ನಾಮಫಲಕ ಅನಾವರಣ ಮಾಡಲಾಯಿತು.
ಗ್ರಾ.ಪಂ. ಗ್ರಂಥಾಲಯದ ವತಿಯಿಂದ ಸ್ವಾತಂತ್ರ್ಯೋತ್ಸವದ ಕುರಿತು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಕಾರ್ಯದರ್ಶಿ ರಮೇಶ್ ಟಿ., ಉಪಾಧ್ಯಕ್ಷ ರವಿಚಂದ್ರ ಕಾಪಿಲ, ಸದಸ್ಯರುಗಳಾದ ಇಬ್ರಾಹಿಂ ಕಾಸಿಂ, ಶ್ರೀಧರ ಕುತ್ಯಾಳ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ಶ್ರೀಮತಿ ಸುಮಿತ್ರ ಕುತ್ಯಾಳ, ಶ್ರೀಮತಿ ದೇವಕಿ ಕುದ್ಕುಳಿ, ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಗೌಡ ಬೊಮ್ಮೆಟ್ಟಿ, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ, ಮಾಜಿ ಗ್ರಾ.ಪಂ. ಅಧ್ಯಕ್ಷ ವಸಂತ ಗಬ್ಬಲಡ್ಕ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಕನಕಮಜಲು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಹಮೀದ್ , ಸುಣ್ಣಮೂಲೆ ಮಸೀದಿ ಅಧ್ಯಕ್ಷ ಪಿ.ಎ. ಬಾಪು, ವಿಜಯಕುಮಾರ್ ನರಿಯೂರು, ಹೇಮಂತ್ ಮಠ, ಗ್ರಂಥಾಲಯ ಮೇಲ್ವಿಚಾರಕಿ ನಮಿತ ಕಾರಿಂಜ, ಯುವಕ ಮಂಡಲದ ಅಧ್ಯಕ್ಷ ರಕ್ಷಿತ್ ಅಕ್ಕಿಮಲೆ ಸೇರಿದಂತೆ ಯುವಕ ಮಂಡಲದ ಪದಾಧಿಕಾರಿಗಳು, ಗ್ರಾಮದ ಪಶುಸಖಿ ಪೂರ್ಣಿಮ, ಕೃಷಿ ಸಖಿ ಪ್ರೇಮ ಅಡ್ಕಾರು, ಆಶಾ ಕಾರ್ಯಕರ್ತೆಯರು, ಶ್ರೀ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಲೋಲಾಕ್ಷಿ ಕೊಲ್ಲಂತಡ್ಕ, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಸೇರಿದಂತೆ ಗ್ರಾ.ಪಂ. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.