ನಾಗಪಟ್ಟಣದಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ- ಸ್ವಾತಂತ್ರ್ಯ ನಡಿಗೆ

0

ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ನಾಗಪಟ್ಟಣ ಪರಿಸರದಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ನಾಗಪಟ್ಟಣ ಸರಕಾರಿ ಶಾಲೆಯಲ್ಲಿ ಆಚರಿಸಲಾಯಿತು.

ನಾಗಪಟ್ಟಣ ಸದಾಶಿವ ದೇವಸ್ಥಾನದ ವ್ಯ.ಸ.ಅಧ್ಯಕ್ಷ ದಿನೇಶ್ ಕೋಲ್ಚಾರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಹಾಗೂ ಸ.ಕಿ.ಪ್ರಾಥಮಿಕ ಶಾಲೆಯ ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಭಾಗವಹಿಸಿದರು. ಬಳಿಕ ನಾಗಪಟ್ಟಣದ ಮುಖ್ಯ ರಸ್ತೆಯಲ್ಲಿ ಸ್ವಾತಂತ್ರ್ಯದ ಘೋಷಣೆಯೊಂದಿಗೆ ಸ್ವಾತಂತ್ರ್ಯ ನಡಿಗೆಯು ನಡೆಯಿತು. ಸ್ಥಳೀಯರು ಪಾಲ್ಗೊಂಡರು.