ಪಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ

0

ಪಂಜ ಗ್ರಾಮ‌ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಇವರು ಧ್ವಜಾರೋಹಣ ಗೈದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಎನ್, ಮಾಜಿ ತಾ.ಪಂ. ಸದಸ್ಯೆ ಶ್ರೀಮತಿ ಸುವರ್ಣಿನಿ‌ ಎನ್.ಎಸ್., ಗ್ರಾ.ಪಂ. ಆಡಳಿತ ಮಂಡಳಿಯ ಸರ್ವ ಸದಸ್ಯರುಗಳು, ಗ್ರಾ.ಪಂ.ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು.