ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ- ಸನ್ಮಾನ

0

ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ಕುತ್ಯಾಡಿ ಧ್ವಜಾರೋಹಣ ನೆರವೇರಿಸಿದರು.


ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರಾದ ಎಸ್.ಎನ್.ಮನ್ಮಥ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ,ಕಾರ್ಯದರ್ಶಿ ತಿರುಮಲೇಶ್ವರ ಉಪಸ್ಥಿತರಿದ್ದರು.


ಸನ್ಮಾನ


ಸ್ವಚ್ಛತಾ ನಿರತರಾದ
ಜಯಂತ ಬೋಳುಗುಡ್ಡೆ, ನಂದಕುಮಾರ್ ಪಿ.ಎಸ್.ಪವಿತ್ರಮಜಲು,ದರ್ಶಿತ್ ಕೊಚ್ಚಿ,ತೇಜಸ್ ಪಿ.ಎಸ್.ಪವಿತ್ರಮಜಲು ರವರನ್ನು ಶಾಲು,ಹೊದಿಸಿ ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಪಿ.ಡಿಒ ಶ್ಯಾಮ್ ಪ್ರಸಾದ್ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.
ಗ್ರಾಮ ಪಂಚಾಯತ್ ಸದಸ್ಯರು,ಗ್ರಾಮಸ್ಥರು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.