ಎಲಿಮಲೆ : ಸರಕಾರಿ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

0

ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಧ್ವಜಾರೋಹಣವನ್ನು ದೇವಚಳ್ಳ ಗ್ರಾಮ ಪಂಚಾಯಿತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ನೆರವೇರಿಸಿದರು.


ನಂತರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಭಾ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಮತ್ತು ಭಾಷಣ ಸ್ಪರ್ಧೆ ನಡೆಯಿತು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ ಡಿ ಎಂ ಸಿ ಅಧ್ಯಕ್ಷ ಧನಂಜಯ ಬಾಳೆತೋಟ ಇವರು ವಹಿಸಿದ್ದು, ಅತಿಥಿಗಳಾಗಿ ಎಸ್‌ ಡಿ ಎಂ ಸಿ ಸದಸ್ಯರಾದ ಮಾಧವ ಎಂ, ಪುರುಷೋತ್ತಮ ಸುಳ್ಳಿ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ಅಂಬೆಕಲ್ಲು , ಬದ್ರಿಯಾ ಜುಮ್ಮಾ ಮಸೀದಿ ಎಲಿಮಲೆಯ ಧರ್ಮಗುರುಗಳಾದ ಅನಸ್ ಅಜ್ಹರಿ ಹಾಗೂ ಮುಖ್ಯ ಶಿಕ್ಷಕಿ ಸಂಧ್ಯಾ ಕೆ ಭಾಗವಹಿಸಿದ್ದರು. ಈ ಸಂದರ್ಭ ಶಿಕ್ಷಕರು, ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಶ್ರೀಮತಿ ರಾಜೇಶ್ವರಿ ಎಂ ಟಿ ಸ್ವಾಗತಿಸಿ, ಶಿಕ್ಷಕಿ ಸಂಗೀತ ಸಿ ವಿ ಧನ್ಯವಾದ ಅರ್ಪಿಸಿದರು. ಶಿಕ್ಷಕರಾದ ವಸಂತ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.