ಸುಬ್ರಹ್ಮಣ್ಯ ದ ಕೆ.ಎಸ್ .ಎಸ್ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪ್ರಾರಂಭೋತ್ಸವ ಕಾರ್ಯಕ್ರಮ ಆ.12 ರಂದು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾl ದಿನೇಶ್ ಪಿ. ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪ್ರಾಕ್ತನ ಸಂಘದ ಸದಸ್ಯರಾದ ಶ್ರೀಮತಿ ವಿಮಲ ರಂಗಯ್ಯ, ಐ.ಕ್ಯೂ.ಎ ಸಿ ಸಂಯೋಜಕರಾದ ಶ್ರೀಮತಿ ಲತಾ ಬಿ.ಟಿ ಕಾಲೇಜಿನ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು .
ಈ ಕಾರ್ಯಕ್ರಮದಲ್ಲಿ ಸಂಸ್ಥೆಗೆ ದಾಖಲಾದ ವಿದ್ಯಾರ್ಥಿಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು ಹಾಗೂ ಪ್ರಥಮ ಪದವಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಶ್ರೀಲತಾ ಕಮಿಲ ಸ್ವಾಗತಿಸಿದರು.ಆಂಗ್ಲಭಾಷೆ ವಿಭಾಗದ ಉಪನ್ಯಾಸಕರಾದ ಸೃಜನ್ ಮುಂಡೋಡಿ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಯಾದ ಶ್ರೀಮತಿ ಅಶ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು.