ದೊಡ್ಡೇರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಅಜ್ಜಾವರ ಗ್ರಾಮದ ದೊಡ್ಡೇರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನದ ಧ್ವಜಾರೋಹಣ ವನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ದಯಾನಂದ ಡಿ.ಕೆ. ನೆರವೇರಿಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣಾನಂತ ಸರಳಾಯ ಹಾಗೂ ಸಹಶಿಕ್ಷಕ ಭುವನ್ ದಿನದ ಮಹತ್ವದ ಕುರಿತು ಮಾತನಾಡಿದರು.

ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ನಾಗವೇಣಿ ಹಾಗೂ ಸದಸ್ಯರು, ಮಕ್ಕಳು, ಪೋಷಕರು ಇದ್ದರು.