ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆ: ಕಾದು ಸುಸ್ತಾದ ರೋಗಿಗಳು
ಇತ್ತೀಚಿಗೆ ತಾಲೂಕಿನಲ್ಲಿ ಸಾಂಕ್ರಮಿಕ ರೋಗಗಳು ವೈರಲ್ ಜ್ವರ ಹೆಚ್ಚಾಗಿ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿದ್ದು ರಕ್ತ ಪರೀಕ್ಷೆ ಕೇಂದ್ರದಲ್ಲಿ ಜನರು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬರುತ್ತಿದೆ.
ಇಂದು ಬೆಳಿಗ್ಗೆಯಿಂದ ರಕ್ತ ಪರೀಕ್ಷ ಕೇಂದ್ರ ದಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆಯೂ ಕೂಡ ಇದ್ದು ಜನರು ಕಾದು ಕಾದು ಸುಸ್ತಾಗುತ್ತಿರುವುದಾಗಿ ತಿಳಿದು ಬಂದಿದೆ.