ಪನ್ನೆಬೀಡು ಶ್ರೀ ಭಗವತಿ ಯುವ ಸೇವಾ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಲೋಗೋ ಬಿಡುಗಡೆ

0

ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ ಸ್ಥಾಪನೆಯಾಗಿ 25 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬದ ಪ್ರಯುಕ್ತ ಲೋಗೋ ಬಿಡುಗಡೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ, ಅಧ್ಯಕ್ಷರಾದ ಸುನಿಲ್ ಕುಮಾರ್ ಕೇರ್ಪಳ, ನಿಕಟಪೂರ್ವಾಧ್ಯಕ್ಷರಾದ ಗೋಪಾಲ ಎಸ್. ನಡುಬೈಲು, ಮಾಜಿ ಅಧ್ಯಕ್ಷರಾದ ವಿಠಲ ರೈ ಬೂಡು ಸಂಘದ ಬೆಳ್ಳಿಹಬ್ಬದ ಲೋಗೋಗಳನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.