ಕಲ್ಮಡ್ಕ ಗ್ರಾಮ ಪಂಚಾಯತಿನ ವಠಾರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆ. 15 ರಂದು ಆಚರಿಸಲಾಯಿತು. ಗ್ರಾ. ಪಂ. ಅಧ್ಯಕ್ಷರಾದ ಮಹೇಶ್ ಕುಮಾರ್ ಕೆ ಎಸ್ ಇವರು ದ್ವಜಾರೋಹಣವನ್ನು ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾ. ಪಂ. ಉಪಾಧ್ಯಕ್ಷರಾದ ಶ್ರೀಮತಿ ಮೋಹಿನಿ ಎಂ, ಸದಸ್ಯರಾದ ಲೋಕೇಶ್ ಆಕ್ರಿಕಟ್ಟೆ, ಲೋಕಯ್ಯ ಬೊಳಿಯೂರು, ಶ್ರೀಮತಿ ಪವಿತ್ರ ಕುದ್ವ, ಶ್ರೀಮತಿ ಜಯಲತಾ ಕೆ ಡಿ, ಶ್ರೀಮತಿ ಮೀನಾಕ್ಷಿ ಎಂ, ಹರೀಶ್ ಎಂ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ದುಲ್ ಗಫೂರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿಯವರು ಹಾಗೂ ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.