ಬೆಳ್ಳಾರೆ ಕೆಪಿಎಸ್ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಗೀತ ಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 ಭಾರತ್ ಸ್ಕೌಟ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆ  ಆಯೋಜಿಸಿದ ಗೀತ ಗಾಯನ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ ಪ್ರಾಥಮಿಕ ವಿಭಾಗದ ಕಬ್ಸ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.  


ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಶಾಂತಿನಗರ ಇಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ತಂಡಕ್ಕೆ ಶಾಲಾ ಸ್ಕೌಟ್ ಮತ್ತು ಗೈಡ್ ಶಿಕ್ಷಕರು ತರಬೇತಿ ನೀಡಿದ್ದರು. ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿರುತ್ತಾರೆ.