ಮುಹಿಯದ್ದೀನ್ ಜುಮಾ ಮಸೀದಿ ಕಲ್ಲುಗುಂಡಿ ಇದರ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಮುಹಿಯದ್ದೀನ್ ಜುಮಾ ಮಸೀದಿ ಕಲ್ಲುಗುಂಡಿ ಇದರ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಮದರಸ ವಿದ್ಯಾರ್ಥಿಗಳ ಜೊತೆ ಆಚರಿಸಲಾಯಿತು. ಧ್ವಜಾರೋಹಣವನ್ನು ಮಸೀದಿಯ ಅಧ್ಯಕ್ಷರಾದ ಎಸ್ ಹಾಲಿಹಾಜಿ ಅವರು ನಿರ್ವಹಿಸಿದರು. ಮಸೀದಿಯ ಖತೀಬರಾದ ಅಬ್ದುಲ್ ನಾಸಿರ್ ದಾರಿಮಿ ಬಹಳ ಅರ್ಥಪೂರ್ಣ ಭರಿತವಾದ ಸ್ವಾತಂತ್ರ್ಯದ ಸಂದೇಶವನ್ನು ವಿವರಿಸಿದರು. ಸಯೀದ್ ಫೈಝಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಮದರಸ ವಿದ್ಯಾರ್ಥಿಗಳು ಬಾವುಟವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಊರಿನ ಅನೇಕ ಗಣ್ಯ ವ್ಯಕ್ತಿಗಳು ಭಾಗವಹಿಸಿದರು. ಕೊನೆಯಲ್ಲಿ ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು..