ಶೇಣಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ

0

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶೇಣಿಯಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಮಾಧವ ಟಿ.ಪಿ. ಧ್ವಜಾರೋಹಣ ಮಾಡಿದರು.

ನಂತರ ಊರಿನ ಮುಖ್ಯ ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಮಾಡಿದರು.

ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ವಿನಯಪ್ರಸಾದ್ ಟಿ. ಸ್ವಾಗತಿಸಿದರು.

ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಧರ್ಮಾವತಿ, ಅಂಗನವಾಡಿ ಬಾಲವಿಕಾಸ ಸಂಘದ ಅಧ್ಯಕ್ಷರಾದ ಶ್ರೀಮತಿ ಶ್ರೇಯಸ್ವಿನಿ ಶುಭಹಾರೈಸಿದರು.

ಅತಿಥಿ ಶಿಕ್ಷಕಿ ಶ್ರೀಮತಿ ಭವ್ಯ ಸಿ.  ಕಾರ್ಯಕ್ರಮ ನಿರೂಪಣೆ ಮಾಡಿದರು. ಸಹ ಶಿಕ್ಷಕ ಪ್ರಭಾಕರ ವಂದನಾರ್ಪಣೆ ಸಲ್ಲಿಸಿದರು. 

ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರದ ಪುಟಾಣಿಗಳು, ವಿದ್ಯಾರ್ಥಿಗಳು, ಶಿಕ್ಷಕವೃಂದ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯರು, ಶಾಲೆಯ ಹಳೆಯ ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಯವರು, ಪೋಷಕರು, ಊರಿನ ಪ್ರಮುಖರು ಹಾಗೂ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.