ಚೊಕ್ಕಾಡಿ ವಿದ್ಯಾಸಂಸ್ಥೆಗಳು ಚೊಕ್ಕಾಡಿ ಪ್ರೌಢಶಾಲೆ ಮತ್ತು ಆಂಗ್ಲ ಮಾಧ್ಯಮ ಶಾಲೆ ಕುಕ್ಕುಜಡ್ಕದಲ್ಲಿ ಸ್ವಾತಂತ್ರ್ಯೋತ್ಸವ

0

ಚೊಕ್ಕಾಡಿ ವಿದ್ಯಾಸಂಸ್ಥೆಗಳು ಪ್ರೌಢಶಾಲೆ ಮತ್ತು ಆಂಗ್ಲ ಮಾಧ್ಯಮ ಶಾಲೆ ಕುಕ್ಕುಜಡ್ಕದಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು‌ ಆ.15 ರಂದು ಆಚರಿಸಲಾಯಿತು.

ಚೊಕ್ಕಾಡಿ ಎಜ್ಯುಕೇಷನ್ ಸೊಸೈಟಿ ಕುಕ್ಕುಜಡ್ಕ ಇದರ ಅಧ್ಯಕ್ಷ ಎಸ್.ಅಂಗಾರ ರವರು ಧ್ವಜಾರೋಹಣ ನೆರವೇರಿಸಿದರು.


ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ಕಾರ್ಯದರ್ಶಿ ತೇಜಸ್ವಿ ಕಡಪಳ, ನಿರ್ದೇಶಕ ಸತ್ಯಪ್ರಸಾದ್ ಪುಳಿಮಾರಡ್ಕ, ಪಂಚಾಯತ್ ಸದಸ್ಯ ಕೃಷ್ಣ ಪ್ರಸಾದ್ ಮಾಡಬಾಕಿಲು, ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಪ್ರತಿಭಾ ಎಸ್. ಆಳ್ವ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಮೂಕಮಲೆ, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.