ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

0

 ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯಲ್ಲಿ  ಆ.15ರಂದು ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಧ್ವಜಾರೋಹಣವನ್ನು ನಿವೃತ್ತ ಪೊಲೀಸ್ ಅಧಿಕಾರಿ ಕೃಷ್ಣಯ್ಯ ಕಾಣಿಕೆ ಅವರು ನೆರವೇರಿಸಿದರು.




ನಂತರ ವಿದ್ಯಾರ್ಥಿಗಳು, ಆಡಳಿತ ಮಂಡಳಿಯವರು, ಪೋಷಕರು ಹಾಗೂ ಶಿಕ್ಷಕರು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ, ಬಹುಮಾನವನ್ನು ಶಾಲಾ ಸಂಚಾಲಕರಾದ ಎವಿ ತೀರ್ಥರಾಮ ಅವರ ಮಾತೃಶ್ರೀ ದಿl ದೇವಕಿ ಅಂಬೆಕಲ್ಲು ಇವರ ಸ್ಮರಣಾರ್ಥ ನೀಡಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು, ಶಾಲಾ ಅಧ್ಯಕ್ಷರು ಸಂಚಾಲಕರು, ನಿರ್ದೇಶಕರು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ದೇಶ ಪ್ರೇಮವನ್ನು ಮೂಡಿಸುವ ನೃತ್ಯ ಹಾಗೂ ದೇಶ ಭಕ್ತಿ ಗೀತೆಯನ್ನು ಹಾಡಿ ಮನರಂಜಿಸಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಕ -ಶಿಕ್ಷಕಿಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.