ಸರಕಾರಿ ಪ್ರೌಢಶಾಲೆ ಮರ್ಕಂಜದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು . ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಕೆ ಇವರು ಧ್ವಜಾರೋಹಣಗೈದರು. ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷರಾದ ಆನಂದ ಬಾಣೂರು , ಗ್ರಾಮ ಪಂಚಾಯತ್ ಸದಸ್ಯರಾದ ಯಶವಂತ ಸೂಟಗದ್ದೆ ,ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವೀಣಾ ಎಂ ಟಿ, ಎಸ್ ಡಿ ಎಂ ಸಿ ಯ ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುರೇಶ್ ಕೆ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ನೂತನ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಸ್ವಾಗತಿಸುವ ಕಾರ್ಯಕ್ರಮ ನಡೆಯಿತು. ನಿಕಟಪೂರ್ವ ಅಧ್ಯಕ್ಷರಾದ ಆನಂದ ಬಾಣೂರು ಇವರು ನೂತನ ಸದಸ್ಯರುಗಳಿಗೆ ಹೂ ನೀಡಿ ಸ್ವಾಗತಿಸಿದರು. ನಿಕಟ ಪೂರ್ವ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಶಾಲೆಯಲ್ಲಿ ಸುಮಾರು 14 ವರ್ಷಗಳ ಕಾಲ ಅಡುಗೆ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿಯನ್ನು ಹೊಂದಿದ ಶ್ರೀಮತಿ ವಸಂತಿಯವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಕುರಿತು ಭಾಷಣ ಹಾಗೂ ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿದರು. ಶಿಕ್ಷಕರಾದ ಶ್ರೀಮತಿ ರುಕ್ಮಿಣಿ ಕೆ ಇವರು ಸ್ವಾತಂತ್ರ್ಯ ದಿನದ ಮಹತ್ವದ ಕುರಿತು ಮಾತನಾಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹರೀಶ್ ಕಂಜಿಪಿಲಿ , ನಿಕಟಪೂರ್ವ ಅಧ್ಯಕ್ಷರಾದ ಆನಂದ ಬಾಣೂರು ಹಾಗೂ ಎಸ್ಡಿಎಂಸಿಯ ಸದಸ್ಯರಾದ ನಿತ್ಯಾನಂದ ಭೀಮ ಗುಳಿಯುವರು ಸಂದರ್ಭೋಚಿತವಾಗಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವೀಣಾ ಎಂ ಟಿ ಸ್ವಾಗತಿಸಿ ,ಹಿರಿಯ ಶಿಕ್ಷಕರಾದ ಶ್ರೀಮತಿ ಪ್ರವೀಣ ಕುಮಾರಿ ಅವರು ವಂದಿಸಿದರು. ವಿದ್ಯಾರ್ಥಿಗಳಾದ ಕುಮಾರಿ ಯಜ್ಞ ಹಾಗೂ ಕುಮಾರಿ ಶ್ವೇತಾ ರವರು ಕಾರ್ಯಕ್ರಮವನ್ನು ನಿರೂಪಿಸಿದರು.