ಬಳ್ಪ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ

0

ಬಳ್ಪ ಗ್ರಾಮ ಪಂಚಾಯತ್ ಕಛೇರಿ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಪಂಚಾಯತ್ ಅಧ್ಯಕ್ಷರಾದ ಹರ್ಷಿತ್ ಕಾರ್ಜ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಹಾತ್ಮ ಗಾಂಧಿ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ನಡೆಯಿತು. ಕಾರ್ಯಕ್ರಮದಲ್ಲಿ ಪಂಚಾಯತ್
ಆಡಳಿತ ಮಂಡಳಿಯ ಉಪಾಧ್ಯಕ್ಷರು, ಸದಸ್ಯರು,
ಪಂಚಾಯತ್ ಅಭಿವೃದ್ಧಿ ಅಧಿಕಾರಿ,
ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಸದಸ್ಯರುಗಳು,
ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಪುಟಾಣಿಗಳು, ಪೋಷಕರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.