ಮಾವಿನಕಟ್ಟೆ ಪ್ರಾ.ಶಾಲೆ ಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

0

ಸ ಹಿ ಪ್ರಾ ಶಾಲೆ ಮಾವಿನಕಟ್ಟೆ ಯಲ್ಲಿ 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಆಶಾ .ಎಸ್ ನೆರವೇರಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದೇವಚಳ್ಳ ಗ್ರಾಮ ಪಂಚಾಯಿತಿ ಸದಸ್ಯೆ ರಾಜೇಶ್ವರಿ, ಎಸ್ ಡಿ ಎಂ ಸಿ ಸದಸ್ಯರಾದ ಮಾಲತಿ, ಬಾಲಕೃಷ್ಣ, ಮುಖ್ಯ ಶಿಕ್ಷಕಿ ರಾಧಿಕಾ ಕೆ.ಎಸ್ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ರಾಧಿಕಾ ಕೆ ಎಸ್ ಸ್ವಾಗತಿಸಿ, ಶಿಕ್ಷಕಿ ಧನ್ಯಶ್ರೀ ವಂದಿಸಿದರು. ಶಿಕ್ಷಕ ದಯಾನಂದ ಎಸ್ ಕಾರ್ಯಕ್ರಮ ನಿರೂಪಿಸಿದರು..

ಕಾರ್ಯಕ್ರಮಕ್ಕೂ ಮೊದಲು ಮಾವಿನಕಟ್ಟೆ ವೃತ್ತದವರೆಗೆ ಮೆರವಣಿಗೆ ನಡೆಯಿತು.
ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಣೆಯ ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.