ಕಲ್ಲುಗುಂಡಿ: ಕಾರು – ಲಾರಿ ಅಪಘಾತ

0

ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯ

ಕಾರೊಂದು ಓವರ್ ಟೇಕ್ ಮಾಡುವ ಯತ್ನದಲ್ಲಿ ಮುಂಭಾಗದಿಂದ ಬರುತ್ತಿದ್ದ ಲಾರಿಗೆ ಢಿಕ್ಕಿಯಾಗಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ದ‌.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಆ.17ರಂದು ರಾತ್ರಿ ಸಂಭವಿಸಿದೆ.

ಮಡಿಕೇರಿ ಕಡೆಯಿಂದ ಸುಳ್ಯಕ್ಕೆ ತೆರಳುತ್ತಿದ್ದ ಲಾರಿಗೆ ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಕಲ್ಲುಗುಂಡಿ ನವಮಿ ಸ್ಟೋರ್ ಮುಂಭಾಗದ ಮುಖ್ಯರಸ್ತೆಯಲ್ಲಿ ಬೇರೊಂದು ವಾಹನವನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
ಲಾರಿಗೆ ಕಾರು ಢಿಕ್ಕಿ ಹೊಡೆದ ರಭಸಕ್ಕೆ ಕಾರು ತಿರುಗಿ ನಿಂತಿದ್ದು, ಗಾಯಾಳುಗಳನ್ನು ಸ್ಥಳೀಯರು ಸೇರಿ ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿರುವುದಾಗಿ ತಿಳಿದುಬಂದಿದೆ.

ಕಲ್ಗುಂಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ