ಪಾಂಡಿಗದ್ದೆ ಶಾಲೆಯ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

0

ಪಾಂಡಿಗದ್ದೆ ದ. ಕ. ಜಿ. ಪಂ. ಕಿ ಪ್ರಾ ಶಾಲೆಯ ನೂತನ ಕೊಠಡಿಗಳ ಉದ್ಘಾಟನಾ ಸಮಾರಂಭ ಆ.17 ರಂದು ನಡೆಯಿತು.

ನೂತನ ಕೊಠಡಿಗಳನ್ನು ಶಾಸಕಿ ಕು.ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ
“ಪಾಂಡಿಗದ್ದೆ ಶಾಲೆಯು ತಾಲೂಕಿನ ಉತ್ತಮ ಶಾಲೆಗಳಲ್ಲಿ ಒಂದಾಗಿದ್ದು ಇಲ್ಲಿನ ಶಿಕ್ಷಕರು, ಎಸ್ ಡಿ ಎಂ ಸಿ, ಪೋಷಕರು ಹಾಗೂ ಊರಿನ ವಿದ್ಯಾಭಿಮಾನಿಗಳಿಂದ ಇದು ಸಾಧ್ಯವಾಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಸ್ಥಾನಗಳನ್ನು ಅಲಂಕರಿಸಲಿ” ಎಂದು ಹೇಳಿದರು.

ಸಭಾಧ್ಯಕ್ಷತೆಯನ್ನು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ,ಸದಸ್ಯರಾದ ಲಕ್ಷ್ಮಣ ಬೊಳ್ಳಾಜೆ , ಶ್ರೀಮತಿ ಮಲ್ಲಿಕಾ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್
ಯು.ಕೆ,ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ್ ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಯಶೋಧರ ಕೆ ಸ್ವಾಗತಿಸಿ ಪ್ರಾಸ್ತಾವಿಕ ಗೈದರು. .ಶಿಕ್ಷಕ ಅಶೋಕ್ ಕುಮಾರ್ ನಿರೂಪಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷ ವಾಚಣ್ಣ ಕೆರೆಮೂಲೆ ವಂದಿಸಿದರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಶಾಲೆಯ ಹಳೆ ವಿದ್ಯಾರ್ಥಿಗಳು ಊರಿನ ವಿದ್ಯಾಭಿಮಾನಿಗಳು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.