ಬಾಂಜಿಕೋಡಿ : ರಿಕ್ಷಾ – ಬೈಕ್ ಡಿಕ್ಕಿ : ಬೈಕ್ ಸವಾರನಿಗೆ ಗಂಭೀರ ಗಾಯ

0

ಐವರ್ನಾಡಿನ ಬಾಂಜಿಕೋಡಿಯಲ್ಲಿ ರಿಕ್ಷಾ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಗಂಭಿರ ಗಾಯಗೊಂಡ ಘಟನೆ ಇದೀಗ ನಡೆದಿದೆ.
ಐವರ್ನಾಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಜಟ್ಟಿಪಳ್ಳದ ಯುವಕನ ಬೈಕಿಗೆ ಸುಳ್ಯ ಕಡೆಯಿಂದ ಐವರ್ನಾಡು ಕಡೆಗೆ ಹೋಗುತ್ತಿದ್ದ ಮೇಘನಾ ಫಾರ್ಮ್ ನ ರಿಕ್ಷಾ ಡಿಕ್ಕಿ ಹೊಡೆಯಿತು.
ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಕೈ ಕಾಲಿಗೆ ಗಂಭೀರ ಗಾಯಗೊಂಡಿದ್ದು ಅವರನ್ನು ಸುಳ್ಯ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದಿರುವುದಾಗಿ ತಿಳಿದು ಬಂದಿದೆ