ರಾಜ್ಯಪಾಲರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆ

0

ಆ.20ರಂದು ಕಲ್ಲುಗುಂಡಿಯಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಪಾದಯಾತ್ರೆಯ ಮೂಲಕ ಪ್ರತಿಭಟನಾ ಸಭೆಗೆ ನಿರ್ಧಾರ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿರುವ ರಾಜ್ಯಪಾಲರ ವಿರುದ್ದ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಆ.20ರಂದು ಸಂಜೆ ಕಲ್ಲುಗುಂಡಿಯ ಕೂಲಿಶೆಡ್ ನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಛೇರಿ ತನಕ ಪಾದಯಾತ್ರೆ ಹಾಗೂ ಕೆನರಾ ಬ್ಯಾಂಕ್ ಮುಂಭಾಗ ಪ್ರತಿಭಟನಾ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಈ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕೆಂದು ಸಂಪಾಜೆ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ ಹಾಗೂ ಕಾರ್ಯದರ್ಶಿ ಟಿ.ಐ. ಲೂಕಾಸ್ ಅವರು ವಿನಂತಿಸಿಕೊಂಡಿದ್ದಾರೆ.