ಚೆಸ್ ಸ್ಪರ್ಧೆ: ಬ್ಲೆಸ್ಡ್ ಕುರಿಯ ಕೋಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

0


 ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಮಂಗಳೂರು, ದಕ್ಷಿಣ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ 17ರ ವಯೋಮಾನದ ವಿಭಾಗದಲ್ಲಿ ಸುಳ್ಯ ತಾಲೂಕಿನ ಗುತ್ತಿಗಾರಿನ ಬ್ಲೆಸ್ಡ್ ಕುರಿಯ ಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ನೇಹಾ ಸಿ ಪಿ ಐದನೇ ಸ್ಥಾನ ಪಡೆದು ಹಾವೇರಿ ಜಿಲ್ಲೆಯಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಈಕೆ ದೇವಚಳ್ಳ ಗ್ರಾಮದ ಪುರುಷೋತ್ತಮ ಸಿ ಎಚ್ (ಮಾಜಿ ಸೈನಿಕ) ಮತ್ತು ಜಾಹ್ನವಿ ದಂಪತಿಗಳ ಪುತ್ರಿ.