ಬೆಳ್ಳಾರೆ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಕುಟುಂಬ ಸಮ್ಮಿಲನ, ಉಚಿತ ಆರೋಗ್ಯ ತಪಾಸಣೆ

0

ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ಆಶ್ರಯದಲ್ಲಿ ಕುಟುಂಬ ಸಮ್ಮಿಳನ, ಉಚಿತ ಆರೋಗ್ಯ ತಪಾಸಣೆ ಆ. 18ರಂದು ಪೆರುವಾಜೆಯ ಜೆಡಿ ಆಡಿಟೋರಿಯಂ ನಲ್ಲಿ ಕ್ಲಬ್‌ನ ಅಧ್ಯಕ್ಷೆ ಶ್ರೀಮತಿ ಉಷಾ ಬಿ. ಭಟ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಡಾ. ಶಿವಪ್ರಸಾದ್ ಶೆಟ್ಟಿ ವೈದ್ಯಕೀಯ ಸಲಹೆ ನೀಡಿ ಬಳಿಕ ಉಚಿತ ಬಿಪಿ, ಶುಗರ್ ಪರೀಕ್ಷೆ ನಡೆಸಿಕೊಟ್ಟರು. ಕ್ಲಬ್‌ನ ಪೂರ್ವಾಧ್ಯಕ್ಷ ವಿಠಲ್ ಶೆಟ್ಟಿ ಪೆರುವಾಜೆ, ಉಪಾಧ್ಯಕ್ಷ ಎಸ್.ಬಿ. ಜಯರಾಮ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯಲ್ಲಿದ್ದ ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗದ ವಿಸ್ತರಣಾಧಿಕಾರಿ ಆನಂದ ರೈ ದೇವಿನಗರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.