ಸೈಂಟ್ ಜೋಸೆಫ್ ಪ್ರೌಢ ಶಾಲೆಗೆ ರನ್ನರ್ಸ್ ಪ್ರಶಸ್ತಿ

0

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆ ಬಾಲಕರ ತಂಡವು ರನ್ನರ್ಸ್ ಪ್ರಶಸ್ತಿ ಗಳಿಸಿದೆ.

ಶಾಲಾ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ’ಸೋಜ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ, ಪುಷ್ಪವೇಣಿ ಸಹಕರಿಸಿದರು.